ಮಗಳ ಹೆರಿಗೆಯಲ್ಲಿ,
ಸುಮ್ಮನಿದ್ದ
ಅಪ್ಪ,
ಪುಟ್ಟ ಮೊಮ್ಮಗಳ
ಕಿವಿ
ಚುಚ್ಚುವಾಗ
ಹಾಕಿದ
ಕಣ್ಣೀರು!!
------------------------------
ಅದೇಕೋ,
ಮೌನದಲ್ಲಿಯ
ನಿಶ್ಚಲ
ಜಡ ವಸ್ತುಗಳೂ,
ಅಂತರಂಗದಲ್ಲಿ
ಹುಚ್ಚೆದ್ದು
ಕುಣಿಯುತ್ತವೆ!!
------------------------------
ಸಾವ ಮನೆಗೆ,
ಹೊರಟ ನೆಂಟನೊಬ್ಬನ ಹೆಂಡತಿ
ತಡೆದು ಹೇಳಿದಳು,
ಉಂಡು ಹೋಗಿ,
ಬರುವುದು
ಹೊತ್ತಾಗಬಹುದು!!
------------------------------
--ಸಂತು
ಚಿಂತನೆಯ ಕಚಗುಳಿ ಇದುವ ಹನಿಗಳು .. ಕೊನೆಯದು ಕಾಡಿತು ..
ReplyDelete(nenapinasanchi.wordpress.com)
@nenapinasanchi
ReplyDeletethank u sir:)