
ಕಡೆಗೂ ಇಂದು ಈ ಚಿತ್ರವನ್ನು ನೋಡಿದೆ. ನೆಟ್‍ಫ್ಲಿಕ್ಸ್'ನಲ್ಲಿದ್ದ ಸಿನಿಮಾವನ್ನು ನೋಡದೆ ಕಡೆಗೊಂದು ದಿನ ಹುಡುಕಿದಾಗ ತೆಗೆದು ಹಾಕಿದ್ದರು. ಇದೀಗ ಯೂಟ್ಯೂಬ್'ನಲ್ಲಿ ಬಿಡುಗಡೆಯಾಗಿದೆ.
ವಿಶೇಷವೆಂದರೆ ಇಂದು ರಾಮನವಮಿಯ ದಿನವೇ "ರಾಮಾ ರಾಮಾ ರೇ" ಸಿನಿಮಾ ನೋಡುವಂತಾಯಿತು.
ಅದ್ಭುತ ಸಿನಿಮಾ...ನಾಲ್ಕು ವರ್ಷದ ಹಿಂದಿನದ್ದು......ನೀವಾಗಲೇ ನೋಡಿರುತ್ತೀರಿ. ಹೇಳಲೇನೂ ಉಳಿದಿಲ್ಲ. ಕಾನ್ಸೆಪ್ಟ್, ಕಲಾವಿದರು, ಹಿನ್ನೆಲೆ ಸಂಗೀತ, "ಕೇಳು ಕೃಷ್ಣ, ಹೇಳು ಪಾರ್ಥ" ಹಾಡು, ಜೀಪು, ಹಸಿರೇ ಇಲ್ಲದ ನೀರು ಕಾಣದ ಒಣ ಭೂಮಿ, ಬಿಸಿಲು, ಜನರು, ಅವರದೇ ಆದ ಆದ್ಯತೆಗಳು, ಆಸೆ, ಮಾನವೀಯತೆ, ಭಗವದ್ಗೀತೆಯ ಸಾರ, ಅತ್ಯುತ್ತಮ ಅಂತ್ಯ .....ಇತ್ಯಾದಿತ್ಯಾದಿ
ಕೆಲವು ಕಡೆಯಂತೂ ಗಂಟಲುಬ್ಬಿ ಬರುವ ನಿರೂಪಣೆ.
ನೀವಿನ್ನೂ ನೋಡಿರದಿದ್ದರೆ ನೋಡಲೇಬೇಕಾದ ಕನ್ನಡದ ಸಿನಿಮಾ...ನೋಡಿ.
-Santhosh kumar LM
02-Apr-2020
Post a Comment
Please post your comments here.